ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಿಕೊಳ್ಳಿ: ಜಿ.ಪಂ. ಸಿಇಒ ಡಾ. ಪ್ರವೀಣ್ ಪಿ. ಬಾಗೇವಾಡಿ
ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಿಕೊಳ್ಳಿ: ಜಿ.ಪಂ. ಸಿಇಒ ಡಾ. ಪ್ರವೀಣ್ ಪಿ. ಬಾಗೇವಾಡಿ
ಅರ್ಹ ಮತದಾರರ ಮರು ಸೇರ್ಪಡೆ ಹಾಗೂ ಹೊಸ ಮತದಾರರ ನೋಂದಣಿ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ 'ಜಾಗೃತಿ ಜಾಥಾ' ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಪ್ರವೀಣ್ ಪಿ. ಬಾಗೇವಾಡಿ ಚಾಲನೆ ನೀಡಿದರು.


ಕೋಲಾರ, ಸೆಪ್ಟೆಂಬರ್ ೧೯ (ಹಿ.ಸ)

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ, ಕರಡು ಮತದಾರರ ಪಟ್ಟಿಯಲ್ಲಿ ಬಿಟ್ಟುಹೋಗಿರುವ ಅರ್ಹ ಮತದಾರರ ಮರು ಸೇರ್ಪಡೆ ಹಾಗೂ ಹೊಸ ಮತದಾರರ ನೋಂದಣಿ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ 'ಜಾಗೃತಿ ಜಾಥಾ' ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಪ್ರವೀಣ್ ಪಿ. ಬಾಗೇವಾಡಿ ಅವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬAಧಿಸಿದAತೆ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಸಾರ್ವಜನಿಕರು ಪಟ್ಟಿಯಲ್ಲಿ ತಮ್ಮ ಹೆಸರು ಹಾಗೂ ಇತರೆ ವಿವರಗಳು ಸರಿಯಾಗಿವೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ಒಂದು ವೇಳೆ ಹೆಸರು ಬಿಟ್ಟುಹೋಗಿದ್ದರೆ, ಕೂಡಲೇ ನಿಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್ಒ) ಸಂಪರ್ಕಿಸಿ. ನಿಗದಿತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವ ಮೂಲಕ ಮರು ಸೇರ್ಪಡೆ ಮಾಡಿಕೊಳ್ಳಬಹುದು ಎಂದು ತಿಳಿಸಿದರು.

ನಗರದ ಬಂಗಾರಪೇಟೆ ವೃತ್ತದಿಂದ ಆರಂಭಗೊAಡ ಜಾಗೃತಿ ಜಾಥಾವು ಎಂ.ಜಿ. ರಸ್ತೆ, ಅಮ್ಮವಾರಿಪೇಟೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಈ ಜಾಥಾದಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಯು ಸಾರ್ವಜನಿಕರಿಗೆ ಮತದಾರರ ಪಟ್ಟಿಯ ಪರಿಷ್ಕರಣಾ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದರು. ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳುವಂತೆ ಜಾಗೃತಿ ಮೂಡಿಸಿದರು.

ವಿಶೇಷ ಸಮಗ್ರ ಪರಿಷ್ಕರಣಾ ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿರುವ ತಮ್ಮ ಹೆಸರು, ವಿಳಾಸ ಹಾಗೂ ಇತರೆ ವಿವರಗಳನ್ನು ಪರಿಶೀಲಿಸಿಕೊಳ್ಳುವುದು ಅತ್ಯಗತ್ಯ. ಕರಡು ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರು ಬಿಟ್ಟುಹೋಗಿದ್ದಲ್ಲಿ, ನಿಗದಿತ ಪ್ರಕ್ರಿಯೆಯಂತೆ ಮರು ಸೇರ್ಪಡೆಗಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಇದೇ ವೇಳೆ, ೧೮ ವರ್ಷ ಪೂರ್ಣಗೊಂಡಿರುವ ಯುವಜನರು ಹೊಸ ಮತದಾರರಾಗಿ ನೋಂದಾಯಿಸಿಕೊಳ್ಳುವAತೆಯೂ ಸಾರ್ವಜನಿಕರಲ್ಲಿ ಮನವಿ ಮಾಡಲಾಯಿತು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ವಿವರಗಳ ತಿದ್ದುಪಡಿ ಸೇರಿದಂತೆ ಮತದಾರರಿಗೆ ಸಂಬAಧಿಸಿದ ವಿವಿಧ ಸೇವೆಗಳನ್ನು ಚುನಾವಣಾ ಆಯೋಗದ ಆನ್ಲೈನ್ ವ್ಯವಸ್ಥೆಗಳ ಮೂಲಕವೂ ಪಡೆಯಬಹುದಾಗಿದೆ. ಆದ್ದರಿಂದ ಪ್ರತಿಯೊಬ್ಬ ಅರ್ಹ ನಾಗರಿಕರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಅನುಕೂಲವಾಗುವಂತೆ ನೋಂದಣಿ ಹಾಗೂ ಪಟ್ಟಿಯಲ್ಲಿನ ವಿವರಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಾಥಾದ ಮೂಲಕ ಅರಿವು ಮೂಡಿಸಲಾಯಿತು.

ಈ ಜಾಗೃತಿ ಜಾಥಾದಲ್ಲಿ ಜಿ.ಪಂ. ಉಪಕಾರ್ಯದರ್ಶಿಗಳಾದ ಟಿ.ಕೆ. ರಮೇಶ್, ಮುಖ್ಯ ಯೋಜನಾಧಿಕಾರಿ ವಿ. ರವಿಚಂದ್ರನ್, ಯೋಜನಾ ನಿರ್ದೇಶಕರಾದ ಹೆಚ್.ಎನ್ ಮಂಜುನಾಥ್ ಸ್ವಾಮಿ, ಎನ್ಆರ್ಎಲ್ಎಂ ಹಾಗೂ ಜಿಲ್ಲಾ ಪಂಚಾಯತ್ ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande