ಬಳ್ಳಾರಿ: ಉಪವಿಭಾಗ-1 : ಸೆ.21 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ, 19 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಜೆಸ್ಕಾಂ ಬಳ್ಳಾರಿ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯ ಮತ್ತು ದುರಸ್ತಿ/ಕಬ್ಬಿಣದ ಕಂಬಗಳ ಬದಲಾವಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿ0ದ ಸೆ.21 ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವ
ಬಳ್ಳಾರಿ: ಉಪವಿಭಾಗ-1 : ಸೆ.21 ರಂದು ವಿದ್ಯುತ್ ವ್ಯತ್ಯಯ


ಬಳ್ಳಾರಿ, 19 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಜೆಸ್ಕಾಂ ಬಳ್ಳಾರಿ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯ ಮತ್ತು ದುರಸ್ತಿ/ಕಬ್ಬಿಣದ ಕಂಬಗಳ ಬದಲಾವಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿ0ದ ಸೆ.21 ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಎಫ್-24 ಮತ್ತು ಎಫ್ -25 ಫೀಡರ್ ವ್ಯಾಪ್ತಿಯ ಪ್ರದೇಶಗಳಾದ ಬಂಡಿಮೋಟ್, ಬಾಪೂಜಿ ನಗರ, ಕುರಿಕಮೇಲ, ಕಮೇಲ ರಸ್ತೆ, ಬೆಂಗಳೂರು ರಸ್ತೆ, ತೇರು ಬೀದಿ, ಬ್ರೂಸ್ಪೇಟೆ ಪೊಲೀಸ್ ಠಾಣೆ, ಟೋಪಿ ಗಲ್ಲಿ, ಮರಿಸ್ವಾಮಿ ಮಠ, ದೊಡ್ಡ ಮಾರ್ಕೆಟ್ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande