ರೈತರ ನ್ಯಾಯಕ್ಕಾಗಿ ನಮ್ಮ ನಡಿಗೆ: ವಿಜಯೇಂದ್ರ
ಮಸ್ಕಿ, 02 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಐತಿಹಾಸಿಕ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಎರಡನೇ ದಿನದ ಪಾದಯಾತ್ರೆ ಸಂತೆಕಲ್ಲೂರಿನಿಂದ ಆರಂಭಗೊಂಡಿತು. ರೈತರ ನ್ಯಾಯಕ್ಕಾಗಿ ಈ ಹೋರಾಟ ನಡೆಯುತ್ತಿದ್ದು, ಅನ್ನದಾತನ ಬೆವರಿಗೆ ನ್ಯಾಯ ದೊರಕಿಸುವುದು ಸರ್ಕಾರದ ಕರ್ತವ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.
ವಿಜಯೇಂದ್ರ


ಮಸ್ಕಿ, 02 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ಐತಿಹಾಸಿಕ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಎರಡನೇ ದಿನದ ಪಾದಯಾತ್ರೆ ಸಂತೆಕಲ್ಲೂರಿನಿಂದ ಆರಂಭಗೊಂಡಿತು. ರೈತರ ನ್ಯಾಯಕ್ಕಾಗಿ ಈ ಹೋರಾಟ ನಡೆಯುತ್ತಿದ್ದು, ಅನ್ನದಾತನ ಬೆವರಿಗೆ ನ್ಯಾಯ ದೊರಕಿಸುವುದು ಸರ್ಕಾರದ ಕರ್ತವ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಪಾದಯಾತ್ರೆ ವೇಳೆ ಮಸ್ಕಿ ತಾಲೂಕಿನ ಅಂಕುಶದೊಡ್ಡಿಗೆ ತೆರಳಿ ರೈತರ ಜಮೀನುಗಳಿಗೆ ಭೇಟಿ ನೀಡಿದ ವಿಜಯೇಂದ್ರ, ಬರದಿಂದ ಹಾನಿಗೊಳಗಾದ ಬೆಳೆಗಳನ್ನು ಪರಿಶೀಲಿಸಿ ರೈತರ ಸಮಸ್ಯೆಗಳನ್ನು ಆಲಿಸಿದರು. ಸಂಕಷ್ಟದಲ್ಲಿರುವ ರೈತರಿಗೆ ಧೈರ್ಯ ತುಂಬಿದರು.

ರೈತರ ಸಮಸ್ಯೆಗಳು ಅಧಿಕಾರಸ್ಥರ ಕಿವಿಗೆ ಕೇಳಿಸಲೆಂದೇ ‘ಬಳ್ಳಾರಿ ಚಲೋ’ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಯಾತ್ರೆಯ ಸಂದರ್ಭದಲ್ಲಿ ಕುರುಬ ಸಮುದಾಯದ ಮುಖಂಡರೊಂದಿಗೆ ಮಾತುಕತೆ ನಡೆಸಿ ಅವರ ಅಹವಾಲುಗಳನ್ನು ಸ್ವೀಕರಿಸಲಾಯಿತು ಎಂದು ತಿಳಿಸಿದರು.

ಮಾಜಿ ಸಚಿವ ಬಿ. ಶ್ರೀರಾಮುಲು, ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜು ಗೌಡ, ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಶಾಸಕ ಮಾನಪ್ಪ ವಜ್ಜಲ್, ಮಾಜಿ ಶಾಸಕರಾದ ಪ್ರತಾಪ್ ಗೌಡ ಪಾಟೀಲ್ ಹಾಗೂ ದೊಡ್ಡನಗೌಡ ಪಾಟೀಲ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ದಾರಿಯುದ್ದಕ್ಕೂ ಜನರು ತೋರಿದ ಪ್ರೀತಿ, ಆತ್ಮೀಯತೆ ಹಾಗೂ ಆಶೀರ್ವಾದವೇ ಹೋರಾಟದ ಶಕ್ತಿ. ರೈತರ ಕಣ್ಣೀರು ಮತ್ತು ಶೋಷಿತರ ಆಕ್ರೋಶ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯಲಿದೆ ಎಂದು ವಿಜಯೇಂದ್ರ ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande