
ಬಳ್ಳಾರಿ, 02 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಬಳ್ಳಾರಿ ನಗರ ಮತ್ತು ತಾಲೂಕಿನ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನ್ಸಿಪಾಲ್ ಕಾಲೇಜು ಮೈದಾನದಲ್ಲಿ ಸೆಪ್ಟೆಂಬರ್ 05 ರಂದು ‘ಪ್ರಜಾಸೇವಾ ಆಂದೋಲನ' ಸಭೆಯನ್ನು ಆಯೋಜಿಸಲಾಗಿದೆ.
ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿ.ನಾಗೇಂದ್ರ ಮತ್ತು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಇವರುಗಳ ಅಧ್ಯಕ್ಷತೆಯಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.
ಜನರ ಸಮಸ್ಯೆಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದ್ದು, ಪ್ರತಿ ತಿಂಗಳ ಶನಿವಾರದಂದು ರಾಜ್ಯಾದ್ಯಂತ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪ್ರಜಾಸೇವೆ ಆಂದೋಲನ ಸಭೆಗಳು ನಡೆಯುತ್ತಿವೆ.
ಬಳ್ಳಾರಿ ನಗರ ಮತ್ತು ತಾಲೂಕಿನ ನಾಗರಿಕರು ತಮ್ಮ ಸಮಸ್ಯೆ, ಕುಂದುಕೊರತೆಗಳ ಅಹವಾಲುಗಳೊಂದಿಗೆ ಈ ಸಭೆಯಲ್ಲಿ ಭಾಗವಹಿಸಿ ಪರಿಹಾರ ಕಂಡುಕೊಳ್ಳುವುದರ ಜೊತೆಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬಳ್ಳಾರಿ ತಾಲೂಕು ತಹಶೀಲ್ದಾರರಾದ ರೇಖಾ.ಟಿ ಅವರು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್