ವಿಶೇಷ ಅಧಿವೇಶನದಲ್ಲಿ ಬರ, ಕಸ್ತೂರಿ ರಂಗನ್ ವರದಿ ಚರ್ಚೆ ಸಿಎಂ, ಡಿಸಿಎಂ
ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ರಾಜ್ಯದಲ್ಲಿ ತೀವ್ರಗೊಂಡಿರುವ ಬರ ಪರಿಸ್ಥಿತಿ ಹಾಗೂ ಪಶ್ಚಿಮಘಟ್ಟಕ್ಕೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ಸೋಮವಾರದಿಂದ ವಿಧಾನಮಂಡಲದ ಮೂರು ದಿನಗಳ ವಿಶೇಷ ಅಧಿವೇಶನ ಆರಂಭವಾಗಲಿದೆ. ಮುಂಗಾರು ಅಧಿವೇಶನದಲ್ಲಿ ಗದ್ದಲದ ಕಾರಣ ಸಮಗ್ರ ಚ
Drought-Kasturirangan-Report-Discussion-Focus-on-Special-Session


ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ರಾಜ್ಯದಲ್ಲಿ ತೀವ್ರಗೊಂಡಿರುವ ಬರ ಪರಿಸ್ಥಿತಿ ಹಾಗೂ ಪಶ್ಚಿಮಘಟ್ಟಕ್ಕೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ಸೋಮವಾರದಿಂದ ವಿಧಾನಮಂಡಲದ ಮೂರು ದಿನಗಳ ವಿಶೇಷ ಅಧಿವೇಶನ ಆರಂಭವಾಗಲಿದೆ.

ಮುಂಗಾರು ಅಧಿವೇಶನದಲ್ಲಿ ಗದ್ದಲದ ಕಾರಣ ಸಮಗ್ರ ಚರ್ಚೆಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಈ ಅಧಿವೇಶನದಲ್ಲಿ ಎರಡೂ ಪ್ರಮುಖ ವಿಷಯಗಳು ಚರ್ಚೆಗೆ ಬರಲಿವೆ.

ರಾಜ್ಯದ ಬರ ಪರಿಸ್ಥಿತಿ, ಕುಡಿಯುವ ನೀರಿನ ಕೊರತೆ, ವಿದ್ಯುತ್ ಸಮಸ್ಯೆ, ಬರಪೀಡಿತ ಪ್ರದೇಶಗಳ ಘೋಷಣೆಯಲ್ಲಿ ತಾರತಮ್ಯ ಹಾಗೂ ರೈತರ ಸಂಕಷ್ಟ ಸೇರಿದಂತೆ ಹಲವು ವಿಚಾರಗಳನ್ನು ಪ್ರತಿಪಕ್ಷಗಳು ಪ್ರಸ್ತಾಪಿಸಲು ಸಿದ್ಧತೆ ನಡೆಸಿವೆ. ಕೇಂದ್ರದಿಂದ ಬರ ಪರಿಹಾರಕ್ಕೆ ತ್ವರಿತ ನೆರವು ನೀಡುವಂತೆ ರಾಜ್ಯ ಸರ್ಕಾರವೂ ಒತ್ತಾಯಿಸುವ ಸಾಧ್ಯತೆಯಿದೆ.

ಇದೇ ವೇಳೆ, ಪಶ್ಚಿಮಘಟ್ಟ ವ್ಯಾಪ್ತಿಯ 1,449 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ಕುರಿತು ವಿಶೇಷ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ.

ಈ ಕ್ರಮದಿಂದ ಪಶ್ಚಿಮಘಟ್ಟ ವ್ಯಾಪ್ತಿಯ ಜನರು ಹಾಗೂ ರೈತರಿಗೆ ತೊಂದರೆಯಾಗಬಹುದು ಎಂಬ ಆತಂಕ ವ್ಯಕ್ತವಾಗಿದ್ದು, ಕರಡು ಅಧಿಸೂಚನೆ ವಿರೋಧಿಸಿ ನಿರ್ಣಯ ಮಂಡಿಸುವ ಸಾಧ್ಯತೆಯೂ ಇದೆ.

‘ಬರ ಹಾಗೂ ಕಸ್ತೂರಿ ರಂಗನ್ ವರದಿ ಕುರಿತು ವಿಶೇಷ ಅಧಿವೇಶನದಲ್ಲಿ ಚರ್ಚಿಸಲಾಗುವುದು. ರೈತರ ಹಿತ ಕಾಪಾಡಲು ಹಾಗೂ ಬರ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದ ಮಲೆನಾಡು ಭಾಗದಲ್ಲಿ ಉಂಟಾಗಬಹುದಾದ ಸಮಸ್ಯೆಗಳ ಕುರಿತು ಸ್ಥಳೀಯರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕೇರಳ ಮಾದರಿಯಲ್ಲಿ ಭೌತಿಕ ಸಮೀಕ್ಷೆ ನಡೆಸುವ ಬಗ್ಗೆಯೂ ಶಾಸಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.

--------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande