ಟ್ರೇಡಿಂಗ್ ಹೆಸರಿನಲ್ಲಿ ₹93 ಲಕ್ಷ ವಂಚನೆ: ಮ್ಯೂಲ್ ಖಾತೆಗಳಿಗೆ ಹಣ ವರ್ಗಾವಣೆ, ಮೂವರ ಬಂಧನ
ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹93 ಲಕ್ಷ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ವಂಚನೆಯಿಂದ ಪಡೆದ ಹಣವನ್ನು ವಿವಿಧ ಮ್ಯೂಲ್ ಬ್ಯ
trading-fraud-rs-93-lakh-transferred-to-mule-accounts-three-arrested


ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹93 ಲಕ್ಷ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ವಂಚನೆಯಿಂದ ಪಡೆದ ಹಣವನ್ನು ವಿವಿಧ ಮ್ಯೂಲ್ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು, ಬಳಿಕ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆನ್ಲೈನ್ ಟ್ರೇಡಿಂಗ್ ಮೂಲಕ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿದ ಆರೋಪಿಗಳು, ಹಂತ ಹಂತವಾಗಿ ಹಣ ಹೂಡಿಕೆ ಮಾಡುವಂತೆ ಸಂತ್ರಸ್ತನಿಗೆ ಸೂಚಿಸಿದ್ದರು.

ಅವರ ಮಾತು ನಂಬಿದ ಸಂತ್ರಸ್ತರು ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಿದ್ದರು. ಒಟ್ಟು ₹93 ಲಕ್ಷ ವರ್ಗಾವಣೆಯಾದ ಬಳಿಕವೂ ಲಾಭದ ಹಣವನ್ನು ನೀಡದೆ ಆರೋಪಿಗಳು ವಂಚಿಸಿದ್ದಾರೆ ಎಂದು ದೂರು ನೀಡಲಾಗಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹಣದ ವಹಿವಾಟಿನ ಜಾಡು ಹಿಡಿದು ತನಿಖೆ ನಡೆಸಿದಾಗ, ವಂಚನೆಯ ಹಣವನ್ನು ಇತರರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿರುವುದು ಬೆಳಕಿಗೆ ಬಂದಿದೆ. ಈ ಖಾತೆಗಳನ್ನು ಹಣ ವರ್ಗಾವಣೆಗೆ ಬಳಸಿಕೊಂಡಿದ್ದ ಆರೋಪದ ಮೇರೆಗೆ ಮೂವರನ್ನು ಬಂಧಿಸಲಾಗಿದೆ.

ಟ್ರೇಡಿಂಗ್ ಹಾಗೂ ಹೂಡಿಕೆಯ ಹೆಸರಿನಲ್ಲಿ ಅಪರಿಚಿತರು ಹೆಚ್ಚಿನ ಲಾಭದ ಆಮಿಷವೊಡ್ಡಿದರೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು.

ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ನಂಬಿಕೆ ಮೇರೆಗೆ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡುವ ಮುನ್ನ ಅದರ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಪ್ರಕರಣದ ಮುಂದಿನ ತನಿಖೆ ಮುಂದುವರಿದಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande