ಬೈಕ್ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಓರ್ವ ಸಾವು; ಮತ್ತೋರ್ವ ಗಂಭೀರ
ಶ್ರೀರಂಗಪಟ್ಟಣ, 21 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣದ ಕಿರಂಗೂರು ಬನ್ನಿಮಂಟಪದ ಬಳಿ ನಡೆದಿದೆ. ಎಂ.ಶೆಟ್ಟಹಳ್ಳಿ ಗ್ರಾಮದ ಶಿವನಂಜೇಗೌಡ (65) ಮೃತ ದುರ್ದೈವಿ
Bike-Car-Accident-Srirangapatna-One-Killed-One-Seriously-Injured


ಶ್ರೀರಂಗಪಟ್ಟಣ, 21 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣದ ಕಿರಂಗೂರು ಬನ್ನಿಮಂಟಪದ ಬಳಿ ನಡೆದಿದೆ.

ಎಂ.ಶೆಟ್ಟಹಳ್ಳಿ ಗ್ರಾಮದ ಶಿವನಂಜೇಗೌಡ (65) ಮೃತ ದುರ್ದೈವಿ. ಬೈಕ್ನ ಹಿಂಬದಿಯಲ್ಲಿ ಕುಳಿತಿದ್ದ ನಾರಾಯಣ ಎಂಬುವರಿಗೆ ಅಪಘಾತದಲ್ಲಿ ಕಾಲು ಮುರಿದಿದ್ದು, ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಶ್ರೀರಂಗಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಹಾಗೂ ಕಾರಿನ ಚಾಲಕನ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಅಪಘಾತದ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande