ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ಸಜ್ಜನ ರಾಜಕಾರಣಿ; ಸಿಎಂ ಸ್ಮರಣೆ
ಬೆಂಗಳೂರು, 21 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ‘ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ವ್ಯಕ್ತಿ, ಸಜ್ಜನ ಅಪರೂಪದ ರಾಜಕಾರಣಿಯಾಗಿದ್ದರು’ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಮರಿಸಿದರು. ಸೋಮವಾರ ಆರಂಭವಾದ ವಿಶೇಷ ಅಧಿವೇಶನದಲ್ಲಿ ವಿಧಾನಸಭೆಯ ಸಂತಾಪ ಸೂಚಕ ನಿರ್ಣಯದ ಮೇಲೆ ಇತ್ತೀಚೆಗೆ ನ
ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಮುಖ್ಯಮಂತ್ರಿ


ಬೆಂಗಳೂರು, 21 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

‘ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ವ್ಯಕ್ತಿ, ಸಜ್ಜನ ಅಪರೂಪದ ರಾಜಕಾರಣಿಯಾಗಿದ್ದರು’ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಮರಿಸಿದರು.

ಸೋಮವಾರ ಆರಂಭವಾದ ವಿಶೇಷ ಅಧಿವೇಶನದಲ್ಲಿ ವಿಧಾನಸಭೆಯ ಸಂತಾಪ ಸೂಚಕ ನಿರ್ಣಯದ ಮೇಲೆ ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಬಗ್ಗೆ ಸಿಎಂ ಮಾತನಾಡಿದರು.

‘ಡಾ. ಆರ್.ಬಿ.ಶಿರಿಯಣ್ಣವರ ನಿಧನದಿಂದ ತುಂಬಲಾರದ ನಷ್ಟವಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಜನಿಸಿ 2004ರಲ್ಲಿ ನವಲಗುಂದ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಆರ್.ಬಿ.ಶಿರಿಯಣ್ಣವರ ತಮ್ಮ ಜನಪರ ಕಾರ್ಯಗಳಿಂದ ಕ್ಷೇತ್ರದಲ್ಲಿ ಅಪಾರ ಜನಪ್ರಿಯತೆ ಗಳಿಸಿದ್ದರು' ಎಂದರು.

'ನಮ್ಮಿಬ್ಬರ ಪಕ್ಷ ಬೇರೆ ಇರಬಹುದು. ಅವರೊಂದಿಗೆ ನಾನು ವಿಧಾನಸಭೆ ಸದಸ್ಯನಾಗಿದ್ದೆ. ಮೃತರ ಆತ್ಮಕ್ಕೆ ಶಾಂತಿಸಿಗಲಿ, ಅನುಯಾಯಿಗಳು, ಬಂಧುಮಿತ್ರರಿಗೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ’ ಎಂದು ಸಿಎಂ ಪ್ರಾರ್ಥಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande