ಕಸ್ತೂರಿರಂಗನ್ ವರದಿ ಚರ್ಚೆಗೆ ಅವಕಾಶ:ಮುಖ್ಯಮಂತ್ರಿ
ಬೆಂಗಳೂರು, 21 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಜನರ ಭಾವನೆಯನ್ನು ಅರ್ಥ ಮಾಡಿಕೊಂಡು ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆದಿದ್ದೇವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಇದು ತಮ್ಮ ಒಬ್ಬರ ಸರ್ಕಾರವಲ್ಲ, ಎಲ್ಲರ ಸರ್ಕಾ
ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಮುಖ್ಯಮಂತ್ರಿ


ಬೆಂಗಳೂರು, 21 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಜನರ ಭಾವನೆಯನ್ನು ಅರ್ಥ ಮಾಡಿಕೊಂಡು ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆದಿದ್ದೇವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಇದು ತಮ್ಮ ಒಬ್ಬರ ಸರ್ಕಾರವಲ್ಲ, ಎಲ್ಲರ ಸರ್ಕಾರವಾಗಿದೆ ಎಂದು ಹೇಳಿದರು. ಕಸ್ತೂರಿರಂಗನ್ ವರದಿಯಿಂದ ಎದುರಾಗಬಹುದಾದ ಸಮಸ್ಯೆಗಳ ಕುರಿತು ಜನರ ಕಷ್ಟಗಳನ್ನು ಕಣ್ಣಾರೆ ಕಂಡಿದ್ದೇನೆ ಎಂದರು.

ವಿಪಕ್ಷಗಳಿಗೆ ನಿಲುವಳಿ ಸೂಚನೆ ನೀಡುವ ಅಗತ್ಯವಿಲ್ಲದೆ ನೇರವಾಗಿ ಈ ವಿಷಯದ ಚರ್ಚೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸದನದಲ್ಲಿ ಸ್ಪಷ್ಟಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande