
ನವದೆಹಲಿ, 23 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆರಂಭಿಸಿರುವ ಆಯುಷ್ಮಾನ್ ಭಾರತ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಕಳೆದ ಎಂಟು ವರ್ಷಗಳಲ್ಲಿ ಬಡವರ ಅತಿದೊಡ್ಡ ಆರೋಗ್ಯ ರಕ್ಷಣೆಯ ಕವಚವಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ಐದು ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯ ಒದಗಿಸುವ ಈ ಯೋಜನೆಯಡಿ 60 ಕೋಟಿಗೂ ಹೆಚ್ಚು ಜನರಿಗೆ ಆರೋಗ್ಯ ರಕ್ಷಣೆ ದೊರೆಯುತ್ತಿದೆ ಎಂದು ತಿಳಿಸಿದ್ದಾರೆ.
ಯೋಜನೆಯಡಿ ಇದುವರೆಗೆ 13 ಕೋಟಿಗೂ ಹೆಚ್ಚು ಜನರು ಉಚಿತ ಚಿಕಿತ್ಸೆಯ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.
ಬಡ ಕುಟುಂಬಗಳು ಚಿಕಿತ್ಸೆಯ ಭಾರಿ ವೆಚ್ಚದಿಂದ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸುವ ಈ ಯೋಜನೆ, ಪ್ರಧಾನಿ ನರೇಂದ್ರ ಮೋದಿ ಅವರ ಅಂತ್ಯೋದಯ ಹಾಗೂ ಜನಕಲ್ಯಾಣದ ಸಂಕಲ್ಪದ ಪ್ರಬಲ ಸಂಕೇತವಾಗಿದೆ ಎಂದು ಅವರು ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.