ಪೌರ ಕಾರ್ಮಿಕರೊಂದಿಗೆ ಉಪಾಹಾರ ಸೇವಿಸಿದ ಸಚಿವ ಬಾಲಕೃಷ್ಣ
ಪೌರ ಕಾರ್ಮಿಕರೊಂದಿಗೆ ಉಪಾಹಾರ ಸೇವಿಸಿದ ಸಚಿವ ಬಾಲಕೃಷ್ಣ
Civic Workers Day: Minister HC Balakrishna Shares Breakfast with Sanitation Workers


ಬೆಂಗಳೂರು, 23 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಪೌರಾಡಳಿತ ಸಚಿವ ಹೆಚ್.ಸಿ. ಬಾಲಕೃಷ್ಣ ಅವರು ಪೌರ ಕಾರ್ಮಿಕರೊಂದಿಗೆ ಬೆಳಗಿನ ಉಪಾಹಾರ ಸೇವಿಸಿ, ಅವರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದರು.

ನಗರದ ಸ್ವಚ್ಛತೆ, ನೈರ್ಮಲ್ಯ ಮತ್ತು ಆರೋಗ್ಯಕರ ಪರಿಸರ ಕಾಪಾಡುವಲ್ಲಿ ಪೌರ ಕಾರ್ಮಿಕರ ಸೇವೆಯನ್ನು ಸಚಿವರು ಶ್ಲಾಘಿಸಿದರು.

ಪೌರ ಕಾರ್ಮಿಕರೊಂದಿಗೆ ಉಪಾಹಾರ ಸೇವಿಸಿದ ಸಚಿವರು, ಅವರ ಕರ್ತವ್ಯ ನಿರ್ವಹಣೆಯ ವೇಳೆ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಅಗತ್ಯತೆಗಳ ಕುರಿತು ಮಾಹಿತಿ ಪಡೆದರು.

ಪೌರ ಕಾರ್ಮಿಕರ ಕಲ್ಯಾಣ ಮತ್ತು ಅವರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

“ನಗರಗಳ ಸ್ವಚ್ಛತೆ, ನೈರ್ಮಲ್ಯ ಹಾಗೂ ಆರೋಗ್ಯಕರ ಪರಿಸರವನ್ನು ಕಾಪಾಡುವಲ್ಲಿ ಪೌರ ಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ.

ಪ್ರತಿನಿತ್ಯ ಜನರ ಆರೋಗ್ಯ ಮತ್ತು ನಗರಗಳ ಸ್ವಚ್ಛತೆಗಾಗಿ ನಿಸ್ವಾರ್ಥವಾಗಿ ಶ್ರಮಿಸುತ್ತಿರುವ ಅವರ ಪರಿಶ್ರಮವನ್ನು ಗೌರವಿಸಬೇಕು. ಪೌರ ಕಾರ್ಮಿಕರ ಸೇವೆಯನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ” ಎಂದು ಸಚಿವ ಹೆಚ್.ಸಿ. ಬಾಲಕೃಷ್ಣ ಹೇಳಿದರು.

ಪೌರ ಕಾರ್ಮಿಕರೊಂದಿಗೆ ನೇರವಾಗಿ ಬೆರೆತು ಅವರ ಸಮಸ್ಯೆಗಳನ್ನು ಆಲಿಸುವ ಮೂಲಕ, ಅವರ ಸೇವೆಗೆ ಗೌರವ ಸಲ್ಲಿಸುವ ಪ್ರಯತ್ನವನ್ನು ಸಚಿವರು ಮಾಡಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande