ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ರಾಜೀನಾಮೆ
ಬೆಂಗಳೂರು, 23 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, 2026-27ನೇ ಸಾಲಿನ ಮ
ಯಶವಂತರಾಯಗೌಡ ವಿ. ಪಾಟೀಲ ಸಂಗ್ರಹ ಚಿತ್ರ


ಬೆಂಗಳೂರು, 23 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಇಂಡಿ ತಾಲ್ಲೂಕು ತೀವ್ರ ಬರಗಾಲಕ್ಕೆ ತುತ್ತಾಗಿದೆ. ಆರಂಭದಲ್ಲಿ ಸ್ವಲ್ಪ ಮಳೆಯಾದ ಹಿನ್ನೆಲೆಯಲ್ಲಿ ರೈತರು ಸಾಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಮಾಡಿದ್ದರು. ಆದರೆ ಸಕಾಲದಲ್ಲಿ ಮಳೆಯಾಗದ ಕಾರಣ ಬೆಳೆಗಳು ಬತ್ತಿಹೋಗಿದ್ದು, ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಉಂಟಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಈ ಕುರಿತು ಆ.28ರಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಇಂಡಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸುವಂತೆ ಮನವಿ ಮಾಡಿದ್ದಾಗಿ ಅವರು ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ಒಟ್ಟು 13 ತಾಲ್ಲೂಕುಗಳ ಪೈಕಿ ಇಂಡಿ ಮತ್ತು ಚಡಚಣ ತಾಲ್ಲೂಕುಗಳನ್ನು ಹೊರತುಪಡಿಸಿ, ರಾಜ್ಯದ 188 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಾವು ಆಡಳಿತ ಪಕ್ಷದ ಶಾಸಕರಾಗಿದ್ದು, ಸರ್ಕಾರಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಹಲವು ಬಾರಿ ಸೂಕ್ಷ್ಮವಾಗಿ ಮನವಿ ಮಾಡಿಕೊಂಡಿದ್ದರೂ ತಮ್ಮ ಮಾತು ಹಾಗೂ ಭಾವನೆಗಳಿಗೆ ಬೆಲೆ ಸಿಗುತ್ತಿಲ್ಲ ಎಂದು ಯಶವಂತರಾಯಗೌಡ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ರಾಜಕೀಯ ವಾತಾವರಣದಲ್ಲಿ ಬಲಾಢ್ಯರಿಗೆ ಹಾಗೂ ಒತ್ತಡ ತಂತ್ರಗಳನ್ನು ಅನುಸರಿಸುವವರಿಗೆ ಮನ್ನಣೆ ದೊರೆಯುತ್ತಿದ್ದು, ತಮ್ಮಂತಹ ಸೌಮ್ಯ ಸ್ವಭಾವದವರಿಗೆ ಯಾವುದೇ ಕೆಲಸಗಳಿಗೆ ಮನ್ನಣೆ ದೊರೆಯುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

“ನನ್ನ ಕ್ಷೇತ್ರದ ಜನರ ಆಶೆ, ಆಶೋತ್ತರಗಳಿಗೆ ಸ್ಪಂದಿಸಲು ಸಾಧ್ಯವಾಗದ ಪ್ರಯುಕ್ತ ನಾನು ಸ್ವ-ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಭಾಧ್ಯಕ್ಷರಿಗೆ ಸಲ್ಲಿಸಿರುವ ಪತ್ರದಲ್ಲಿ ಯಶವಂತರಾಯಗೌಡ ವಿ. ಪಾಟೀಲ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande