ಕುಡಿಯುವ ನೀರಿಗೂ ಅನುದಾನ ನೀಡಲಾಗದಷ್ಟು ಸರ್ಕಾರ ಆಡಳಿತಾತ್ಮಕವಾಗಿ ಸೋತಿದೆ: ವಿಜಯೇಂದ್ರ
ಬೆಂಗಳೂರು, 23 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ರಾಜ್ಯದಲ್ಲಿ ಬರದ ತೀವ್ರತೆ ಹೆಚ್ಚಾಗಿದ್ದು, 177ಕ್ಕೂ ಅಧಿಕ ತಾಲೂಕುಗಳು ಬರಪೀಡಿತವಾಗಿವೆ. 109 ತಾಲೂಕುಗಳ 799 ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಆದರೂ ಕಾಂಗ್ರೆಸ್ ಸರ್ಕಾರ ಕಣ್ಣು ತೆರೆದು ಪರಿಸ್ಥಿತಿಯನ್ನು ಗಮನಿಸುತ್ತಿಲ್ಲ ಎಂದ
ವಿಜಯೇಂದ್ರ


ಬೆಂಗಳೂರು, 23 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ರಾಜ್ಯದಲ್ಲಿ ಬರದ ತೀವ್ರತೆ ಹೆಚ್ಚಾಗಿದ್ದು, 177ಕ್ಕೂ ಅಧಿಕ ತಾಲೂಕುಗಳು ಬರಪೀಡಿತವಾಗಿವೆ. 109 ತಾಲೂಕುಗಳ 799 ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಆದರೂ ಕಾಂಗ್ರೆಸ್ ಸರ್ಕಾರ ಕಣ್ಣು ತೆರೆದು ಪರಿಸ್ಥಿತಿಯನ್ನು ಗಮನಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಈ ಕುರಿತು ‘ಎಕ್ಸ್‌’ನಲ್ಲಿ ಹೇಳಿಕೆ ನೀಡಿರುವ ಅವರು, ಜುಲೈ 31ರಂದು ಗ್ರಾಮೀಣ ಕ್ಷೇತ್ರಗಳಿಗೆ ತಲಾ ಒಂದು ಕೋಟಿ ರೂ.ನಂತೆ ಒಟ್ಟು 189 ಕೋಟಿ ರೂ. ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ ಇದುವರೆಗೆ ಹಣ ಬಿಡುಗಡೆಯಾಗಿಲ್ಲ ಎಂದು ದೂರಿದ್ದಾರೆ.

ಏಪ್ರಿಲ್‌ನಲ್ಲಿ ಹಂಚಿಕೆಯಾದ ಅನುದಾನದಲ್ಲಿಯೂ 168 ಕೋಟಿಗೂ ಅಧಿಕ ಹಣವನ್ನು ವೆಚ್ಚ ಮಾಡದೆ ಉಳಿಸಿರುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಬೊಕ್ಕಸ ಖಾಲಿ ಮಾಡಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯವಾಗದೆ, ಇದೀಗ ಕುಡಿಯುವ ನೀರಿಗೂ ಅನುದಾನ ನೀಡಲಾಗದಷ್ಟು ಆಡಳಿತಾತ್ಮಕವಾಗಿ ಸರ್ಕಾರ ಸೋತಿದೆ ಎಂದು ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ನಿಮ್ಮ ಈ ಸರಣಿ ವೈಫಲ್ಯಗಳೇ ನೀವು ಹೇಳುವ ಕರ್ನಾಟಕ ಮಾದರಿಯೇ?’ ಎಂದು ಪ್ರಶ್ನಿಸಿರುವ ವಿಜಯೇಂದ್ರ, ತಕ್ಷಣ ಬಾಕಿ ಅನುದಾನ ಬಿಡುಗಡೆ ಮಾಡಿ ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಚಾರದ ಗುಂಗಿನಿಂದ ಹೊರಬಂದು ರಾಜ್ಯದ ವಾಸ್ತವ ಪರಿಸ್ಥಿತಿಗಳತ್ತ ಗಮನಹರಿಸಬೇಕು. ಇಲ್ಲದಿದ್ದರೆ ಕುಡಿಯುವ ನೀರಿಗಾಗಿ ಜನರು ದಂಗೆ ಏಳುವಂತಹ ಪರಿಸ್ಥಿತಿಯನ್ನು ಸರ್ಕಾರವೇ ನಿರ್ಮಿಸಿದಂತಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande