ಆಯುಷ್ಮಾನ್ ಭಾರತ ಯೋಜನೆಗೆ ಎಂಟು ವರ್ಷ; ಸಾಧನೆಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ
ನವದೆಹಲಿ, 23 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ದೇಶದ ಪ್ರತಿಯೊಬ್ಬ ನಾಗರಿಕನಿಗೂ ಗುಣಮಟ್ಟದ ಹಾಗೂ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಆರಂಭಿಸಲಾದ ‘ಆಯುಷ್ಮಾನ್ ಭಾರತ’ ಯೋಜನೆ ಎಂಟು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಜನೆಯ ಸಾಧನೆಗಳನ್ನು ಶ್ಲ
प्रधानमंत्री नरेन्द्र मोदी


ನವದೆಹಲಿ, 23 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ದೇಶದ ಪ್ರತಿಯೊಬ್ಬ ನಾಗರಿಕನಿಗೂ ಗುಣಮಟ್ಟದ ಹಾಗೂ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಆರಂಭಿಸಲಾದ ‘ಆಯುಷ್ಮಾನ್ ಭಾರತ’ ಯೋಜನೆ ಎಂಟು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಜನೆಯ ಸಾಧನೆಗಳನ್ನು ಶ್ಲಾಘಿಸಿದ್ದಾರೆ.

ಬುಧವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಎಂಟು ವರ್ಷಗಳ ಹಿಂದೆ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಉತ್ತಮ ಹಾಗೂ ಕೈಗೆಟುಕುವ ವೈದ್ಯಕೀಯ ಸೌಲಭ್ಯ ದೊರೆಯಬೇಕು ಎಂಬ ಆಶಯದೊಂದಿಗೆ ಆಯುಷ್ಮಾನ್ ಭಾರತ ಯೋಜನೆ ಆರಂಭಿಸಲಾಗಿತ್ತು ಎಂದು ಹೇಳಿದ್ದಾರೆ.

ಯೋಜನೆಯಡಿ ಪ್ರಸ್ತುತ 60 ಕೋಟಿಗೂ ಹೆಚ್ಚು ಜನರಿಗೆ ವಾರ್ಷಿಕವಾಗಿ ಗರಿಷ್ಠ ಐದು ಲಕ್ಷ ರೂ.ವರೆಗೆ ಆರೋಗ್ಯ ರಕ್ಷಣೆಯ ಸೌಲಭ್ಯ ದೊರೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಆಯುಷ್ಮಾನ್ ಭಾರತ ಯೋಜನೆಯಿಂದ ಜನರ ವೈದ್ಯಕೀಯ ವೆಚ್ಚದಲ್ಲಿ ದೊಡ್ಡ ಪ್ರಮಾಣದ ಉಳಿತಾಯ ಸಾಧ್ಯವಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಯೋಜನೆಯಿಂದ ವ್ಯಾಪಕ ಪ್ರಯೋಜನ ದೊರೆತಿದ್ದು, ಆರ್ಥಿಕವಾಗಿ ದುರ್ಬಲ ಕುಟುಂಬಗಳ ಮೇಲೆ ಗಂಭೀರ ಕಾಯಿಲೆಗಳ ಚಿಕಿತ್ಸೆಯಿಂದ ಉಂಟಾಗುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಸಹಾಯವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಆರೋಗ್ಯ ಸೇವೆಗಳನ್ನು ಜನರ ಮನೆ ಬಾಗಿಲಿಗೆ ಸಮೀಪಕ್ಕೆ ತರುವ ನಿಟ್ಟಿನಲ್ಲಿ ಆಗಿರುವ ಪ್ರಗತಿಯನ್ನೂ ಪ್ರಧಾನಿ ಉಲ್ಲೇಖಿಸಿದ್ದಾರೆ. ದೇಶಾದ್ಯಂತ ಸ್ಥಾಪಿಸಲಾಗಿರುವ ‘ಆಯುಷ್ಮಾನ್ ಆರೋಗ್ಯ ಮಂದಿರಗಳು’ ಪ್ರಾಥಮಿಕ ಆರೋಗ್ಯ ಸೇವೆಗಳ ಲಭ್ಯತೆಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಕೇಂದ್ರಗಳಿಗೆ ಇದುವರೆಗೆ 500 ಕೋಟಿಗೂ ಅಧಿಕ ಬಾರಿ ಜನರು ಭೇಟಿ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಆಯುಷ್ಮಾನ್ ಆರೋಗ್ಯ ಮಂದಿರಗಳ ವಿಸ್ತರಣೆಯಿಂದ ತಳಮಟ್ಟದ ಪ್ರಾಥಮಿಕ ಆರೋಗ್ಯ ವ್ಯವಸ್ಥೆ ಬಲಗೊಂಡಿದ್ದು, ಜನರಿಗೆ ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲೇ ಆರೋಗ್ಯ ಸೇವೆಗಳು ಲಭ್ಯವಾಗುತ್ತಿವೆ. ಇದರಿಂದ ಆರೋಗ್ಯ ಸೇವೆಗಳ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲು ಸಹಕಾರಿಯಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

ದೇಶದಲ್ಲಿ ಆರೋಗ್ಯ ಸೇವೆಗಳನ್ನು ಮತ್ತಷ್ಟು ಸುಲಭವಾಗಿ ಹಾಗೂ ಕೈಗೆಟುಕುವಂತೆ ಮಾಡುವ ಪ್ರಯತ್ನಗಳ ಭಾಗವಾಗಿ ಆಯುಷ್ಮಾನ್ ಭಾರತ ಯೋಜನೆಯನ್ನು ವಿಸ್ತರಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಯೋಜನೆಯ ಎಲ್ಲ ಫಲಾನುಭವಿಗಳಿಗೆ ಅವರು ಶುಭಾಶಯಗಳನ್ನು ಕೋರಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande