
ಮಂಡ್ಯ, 23 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಹುಟ್ಟುಹಬ್ಬದ ಅಂಗವಾಗಿ ಮಂಡ್ಯದಲ್ಲಿ ಬಿಜೆಪಿ ರಾಜ್ಯ ವೈದ್ಯಕೀಯ ಪ್ರಕೋಷ್ಠದ ವತಿಯಿಂದ ‘ಮೋದಿ@76, ರಕ್ತದಾನ@76’ ಸಂಕಲ್ಪ ಕಾರ್ಯಕ್ರಮ ಆಯೋಜಿಸಲಾಯಿತು.
ಮಂಡ್ಯ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 76 ಮಂದಿ ರಕ್ತದಾನ ಮಾಡುವ ಮೂಲಕ ಪ್ರಧಾನಿಯವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಈ ಮೂಲಕ ರಕ್ತದಾನ ಮಾಡಿ ಒಂದು ಜೀವ ಉಳಿಸುವ ಸಂಕಲ್ಪವನ್ನು ಬಿಜೆಪಿ ಕಾರ್ಯಕರ್ತರು ಕೈಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡರು, “ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸುವುದು ಸಹಜ. ಆದರೆ ರಕ್ತದಾನ ಮಾಡುವ ಮೂಲಕ ಮತ್ತೊಂದು ಜೀವ ಉಳಿಸುವ ಸಂಕಲ್ಪ ಮಾಡಿರುವುದು ಮಹತ್ವದ ಕಾರ್ಯಕ್ರಮ.
ಮೋದಿ ಅವರು ಕಳೆದ 25 ವರ್ಷಗಳಿಂದ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರಿಗೆ ದೇವರು ಆಯುಷ್ಯ, ಆರೋಗ್ಯ ನೀಡಿ ಕಾಪಾಡಲಿ” ಎಂದು ಆಶಿಸಿದರು.ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿಯಿಂದ ವಿವಿಧ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಅದರ ಭಾಗವಾಗಿ ರಕ್ತದಾನ ಶಿಬಿರ ನಡೆಸಲಾಗಿದ್ದು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್, ವೈದ್ಯಕೀಯ ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ. ಸದಾನಂದ, ಪಣಿಷ್, ಸಿದ್ದರಾಮಯ್ಯ, ಎಚ್.ಆರ್. ಅಶೋಕ್ ಕುಮಾರ್, ಡಾ. ಮಂಚೇಗೌಡ, ಇಂಡವಾಳು ಸಚ್ಚಿದಾನಂದ, ಶಿವಕುಮಾರ್ ಆರಾಧ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R