ಐಪಿಎಸ್ ಅಧಿಕಾರಿ ಕುಶಲ್ ಚೌಕ್ಸಿ ದಿಢೀರ್ ವರ್ಗಾವಣೆ
ಬೆಂಗಳೂರು, 24 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸಿದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗಾಗಿ ಹೈಕೋರ್ಟ್ ನಿರ್ದೇಶನದ ಮೇರೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡ (ಎಸ್ಐಟಿ)ಯಲ್ಲಿದ್ದ ಐಪಿಎಸ್ ಅಧಿಕಾರಿ ಕುಶಲ್ ಚೌಕ್ಸಿ ಅವರನ್ನು ರಾಜ್ಯ ಸ
KPSC-SIT-IPS-officer-Kushal-Chowksi-transferred-as-Chitradurga-SP


ಬೆಂಗಳೂರು, 24 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸಿದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗಾಗಿ ಹೈಕೋರ್ಟ್ ನಿರ್ದೇಶನದ ಮೇರೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡ (ಎಸ್ಐಟಿ)ಯಲ್ಲಿದ್ದ ಐಪಿಎಸ್ ಅಧಿಕಾರಿ ಕುಶಲ್ ಚೌಕ್ಸಿ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿದೆ.

ಕುಶಲ್ ಚೌಕ್ಸಿ ಅವರನ್ನು ಚಿತ್ರದುರ್ಗ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ (ಎಸ್ಪಿ) ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಬೆಂಗಳೂರು ನಗರ ಆಡಳಿತ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು, ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗಾಗಿ ಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ರಚಿಸಲಾದ ಎಸ್ಐಟಿಯ ಸದಸ್ಯರಾಗಿದ್ದರು.

ಚಿತ್ರದುರ್ಗ ಎಸ್ಪಿಯಾಗಿದ್ದ ರಂಜಿತ್ ಕುಮಾರ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಕುಶಲ್ ಚೌಕ್ಸಿ ಅವರನ್ನು ನೇಮಿಸಲಾಗಿದೆ.

ಸೆಪ್ಟೆಂಬರ್ 21ರಂದು ಹೈಕೋರ್ಟ್ ಎಸ್ಐಟಿ ರಚನೆಗೆ ಸಂಬಂಧಿಸಿದಂತೆ ಆದೇಶ ನೀಡಿದ ಬೆನ್ನಲ್ಲೇ, ಕೇವಲ 48 ಗಂಟೆಗಳ ಅವಧಿಯಲ್ಲಿ ಕುಶಲ್ ಚೌಕ್ಸಿ ಅವರನ್ನು ವರ್ಗಾವಣೆ ಮಾಡಿರುವುದು ಗಮನ ಸೆಳೆದಿದೆ.

ತಿಂಗಳಲ್ಲೇ ಎರಡು ಬಾರಿ ವರ್ಗಾವಣೆಕುಶಲ್ ಚೌಕ್ಸಿ ಅವರು ಒಂದು ತಿಂಗಳ ಅವಧಿಯಲ್ಲೇ ಎರಡು ಬಾರಿ ವರ್ಗಾವಣೆಗೊಂಡಿದ್ದಾರೆ.

ಆಗಸ್ಟ್ 29ರಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ ವೇಳೆ ಚಿಕ್ಕಬಳ್ಳಾಪುರ ಎಸ್ಪಿ ಹುದ್ದೆಯಿಂದ ಅವರನ್ನು ಬೆಂಗಳೂರು ನಗರ ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿತ್ತು.

ಬೆಂಗಳೂರು ಡಿಸಿಪಿಯಾಗಿ ಅಧಿಕಾರ ವಹಿಸಿಕೊಂಡು ಒಂದು ತಿಂಗಳು ಪೂರ್ಣಗೊಳ್ಳುವ ಮುನ್ನವೇ ಇದೀಗ ಮತ್ತೆ ವರ್ಗಾವಣೆ ಮಾಡಲಾಗಿದೆ.

ಇದೇ ವೇಳೆ ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ಹೈಕೋರ್ಟ್ ಮಹತ್ವದ ಜವಾಬ್ದಾರಿ ನೀಡಿದ್ದ ಹಿನ್ನೆಲೆಯಲ್ಲಿ ಈ ವರ್ಗಾವಣೆ ಕುತೂಹಲ ಮೂಡಿಸಿದೆ.

ಈ ಬಗ್ಗೆ ಸರ್ಕಾರದ ಆದೇಶದಲ್ಲಿ, ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರ ಹುದ್ದೆ ರಂಜಿತ್ ಕುಮಾರ್ ಅವರ ವರ್ಗಾವಣೆಯಿಂದ ತೆರವಾಗಿರುವ ಹಿನ್ನೆಲೆಯಲ್ಲಿ ಕುಶಲ್ ಚೌಕ್ಸಿ ಅವರನ್ನು ಆ ಸ್ಥಾನಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande