
ಕೋಲಾರ, 24 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮರಗಲ್ ಗ್ರಾಮದ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಪುಣೆ ಮೂಲದ ನಾಲ್ವರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ನವನೀತ್ ಗಾಯಕವಾಡ್, ಪವಾರ್ ವಿಶ್ವನಾಥ್, ಕಿರಣ್ ಹಾಗೂ ವಿಶಾಲ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಸೋಮನಾಥ ಕೊಲ್ಲಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಾಗೂ ಗಾಯಾಳುಗಳು ಪುಣೆ ನಿವಾಸಿಗಳಾಗಿದ್ದು, ಕಾರಿನಲ್ಲಿ ತಿರುಪತಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮಧ್ಯಾಹ್ನ ಸುಮಾರು 1.30ರ ವೇಳೆಗೆ ಮರಗಲ್ ಗ್ರಾಮದ ಸಮೀಪ ಕಾರು ಅಪಘಾತಕ್ಕೀಡಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಬಂಗಾರಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಅಪಘಾತದ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ನಿಖರ ಕಾರಣದ ಬಗ್ಗೆ ತನಿಖೆ ಮುಂದುವರಿದಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R