ಗೃಹಲಕ್ಷ್ಮಿ ಗ್ಯಾರಂಟಿಯನ್ನು ಒಂದು ವರ್ಷ ನಿಲ್ಲಿಸಿ: ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಎಂಎಲ್ಸಿ ದಿನೇಶ್ ಗೂಳಿಗೌಡ ಆಗ್ರಹ
ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಎಂಎಲ್ಸಿ ಆಗ್ರಹ
congress-mlc-urges-karnataka-government-to-halt-gruha-lakshmi-guarantee-for-one-year


ಬೆಂಗಳೂರು, 24 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಗೂ ಸರ್ಕಾರದ ಹಣಕಾಸಿನ ನಿರ್ವಹಣೆಯ ಹಿನ್ನೆಲೆಯಲ್ಲಿ ‘ಗೃಹಲಕ್ಷ್ಮಿ’ ಗ್ಯಾರಂಟಿ ಯೋಜನೆಯನ್ನು ಒಂದು ವರ್ಷದ ಮಟ್ಟಿಗೆ ಸ್ಥಗಿತಗೊಳಿಸುವಂತೆ ಕಾಂಗ್ರೆಸ್ನ ಎಂಎಲ್ಸಿ ದಿನೇಶ್ ಗೂಳಿಗೌಡಒತ್ತಾಯಿಸಿದ್ದಾರೆ.

ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಈ ಆಗ್ರಹ ಕೇಳಿಬಂದಿದೆ. ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ಪ್ರತಿ ತಿಂಗಳು ₹2,000 ನೆರವು ನೀಡಲಾಗುತ್ತಿದೆ. ಯೋಜನೆಯ ಫಲಾನುಭವಿಗಳ ಮರುಪರಿಶೀಲನೆಗೂ ಸರ್ಕಾರ ಮುಂದಾಗಿದೆ.

“ರಾಜ್ಯದ ಹಣಕಾಸಿನ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಗೃಹಲಕ್ಷ್ಮಿ ಯೋಜನೆಯನ್ನು ಒಂದು ವರ್ಷ ಸ್ಥಗಿತಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು. ನಂತರ ಆರ್ಥಿಕ ಪರಿಸ್ಥಿತಿ ಸುಧಾರಿಸಿದ ಬಳಿಕ ಯೋಜನೆಯನ್ನು ಮುಂದುವರಿಸಬಹುದು” ಎಂದು ಎಂಎಲ್ಸಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಈ ನಡುವೆ, ಗೃಹಲಕ್ಷ್ಮಿ ಯೋಜನೆಯನ್ನು ಸ್ಥಗಿತಗೊಳಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಎಂಎಲ್ಸಿ ದಿನೇಶ್ ಗೂಳಿಗೌಡ ಅವರು ಜೂನ್ನಲ್ಲಿ ಸ್ಪಷ್ಟಪಡಿಸಿದ್ದರು.

ಫಲಾನುಭವಿಗಳ ಮರುಪರಿಶೀಲನೆಯ ಉದ್ದೇಶ ಅನರ್ಹರನ್ನು ಗುರುತಿಸಿ, ಸರ್ಕಾರಿ ಹಣದ ದುರ್ಬಳಕೆಯನ್ನು ತಡೆಯುವುದಾಗಿದೆ ಎಂದು ಅವರು ಹೇಳಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande