ಎಸ್ಐಆರ್ ರಾಜಕೀಯಕ್ಕೆ ಬಳಕೆ ಸರಿಯಲ್ಲ: ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, 25 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಡೆಸುವುದಕ್ಕೆ ತಮ್ಮ ಆಕ್ಷೇಪವಿಲ್ಲ. ಆದರೆ, ಎಸ್ಐಆರ್‌ ಅನ್ನು ರಾಜಕೀಯ ಉದ್ದೇಶಕ್ಕೆ ಬಳಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಅರಮನೆ ಮೈದಾನದ ಬಳಿ ಶುಕ್ರವಾರ ಮಾಧ
ಮಾಧ್ಯಮಗಳಿಗೆ ಮಾತನಾಡಿದ ಮುಖ್ಯಮಂತ್ರಿ


ಬೆಂಗಳೂರು, 25 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಡೆಸುವುದಕ್ಕೆ ತಮ್ಮ ಆಕ್ಷೇಪವಿಲ್ಲ. ಆದರೆ, ಎಸ್ಐಆರ್‌ ಅನ್ನು ರಾಜಕೀಯ ಉದ್ದೇಶಕ್ಕೆ ಬಳಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಅರಮನೆ ಮೈದಾನದ ಬಳಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಅರ್ಹರೆಲ್ಲರಿಗೂ ಮತದಾನದ ಹಕ್ಕು ಸಿಗಬೇಕು. ಇದು ಪ್ರಜಾಪ್ರಭುತ್ವದ ರಾಷ್ಟ್ರವಾಗಿದ್ದು, ಸರ್ವಾಧಿಕಾರವಲ್ಲ ಎಂದರು.

ಚುನಾವಣಾ ಆಯೋಗದ ಮೂವರು ಸದಸ್ಯರ ಸಮಿತಿಯಲ್ಲೇ ಬಹುಮತದ ನಿರ್ಧಾರವಾಗುತ್ತಿಲ್ಲ ಎಂಬುದು ಬಹಿರಂಗವಾಗಿದೆ. ಈ ವಿಚಾರದಲ್ಲಿ ಯಾರಿಗೂ ತೃಪ್ತಿ ಇಲ್ಲ ಎಂದು ಹೇಳಿದರು.

ರಾಹುಲ್ ಗಾಂಧಿ ಅವರು ಎಸ್ಐಆರ್ ಕುರಿತು ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಹೊಣೆಗಾರರು ಎಂದು ನಾವೂ ಹೇಳಿದ್ದೇವೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸುತ್ತಿರುವುದು ಸಹಜ ಎಂದು ಶಿವಕುಮಾರ್ ಹೇಳಿದರು.

ಬೇರೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮುಂಗಡ ಹಣ ಕೊಟ್ಟಿಲ್ಲವೇ?

ಕೇಂದ್ರದಿಂದ ಮುಂಗಡ ಹಣ ಬಿಡುಗಡೆ ಮಾಡುವಂತೆ ಪತ್ರ ಬರೆದಿರುವ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಡಿದ್ದ ಟೀಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘‘ನಾವು ಕತ್ತೆಯನ್ನೇ ಕಾಯುತ್ತಿದ್ದೇವೆ. ಅವರು ಏನಾದರೂ ಅಂದುಕೊಳ್ಳಲಿ. ಅವರ ಜವಾಬ್ದಾರಿ ಏನು ಎಂಬುದನ್ನು ಅವರು ತಿಳಿದುಕೊಳ್ಳಲಿ’’ ಎಂದರು.

ಬೇರೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮುಂಗಡ ಹಣ ನೀಡಿಲ್ಲವೇ ಎಂದು ಪ್ರಶ್ನಿಸಿದ ಅವರು, ತಂಡ ಕಳುಹಿಸಿ ಮನವಿ ಮಾಡಲಿ ಎಂದರು. ಪ್ರಧಾನಮಂತ್ರಿಯವರ ಭೇಟಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ಸಮಯ ಕೇಳಿದ್ದೇವೆ. ಸಮಯ ಸಿಕ್ಕಾಗ ಜೋಶಿ ಅವರೂ ಬರಲಿ, ಎಲ್ಲರೂ ಬರಲಿ ಎಂದು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande