ನವನಗರದಲ್ಲಿ ₹20 ಲಕ್ಷ ವೆಚ್ಚದ ಸಾರ್ವಜನಿಕ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ
ಬಾಗಲಕೋಟೆ, 27 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : 2025–26ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬಾಗಲಕೋಟೆ ನಗರದ ನವನಗರದಲ್ಲಿ ಸಾರ್ವಜನಿಕ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಉಮೇಶ ಮೇಟಿ ಅವರು ಭೂಮಿಪೂಜೆ ನೆರವೇರಿಸಿದರು. ಸುಮಾರು ₹20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ
ಪೂಜೆ


ಬಾಗಲಕೋಟೆ, 27 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : 2025–26ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬಾಗಲಕೋಟೆ ನಗರದ ನವನಗರದಲ್ಲಿ ಸಾರ್ವಜನಿಕ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಉಮೇಶ ಮೇಟಿ ಅವರು ಭೂಮಿಪೂಜೆ ನೆರವೇರಿಸಿದರು.

ಸುಮಾರು ₹20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ಸಮುದಾಯ ಭವನವು ಸ್ಥಳೀಯ ನಿವಾಸಿಗಳ ವಿವಿಧ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ. ನವನಗರ ಪ್ರದೇಶದಲ್ಲಿ ಸಮುದಾಯದ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಕ್ತ ಮೂಲಸೌಕರ್ಯದ ಅಗತ್ಯವಿದ್ದ ಹಿನ್ನೆಲೆಯಲ್ಲಿ ಭವನ ನಿರ್ಮಾಣಕ್ಕೆ ಯೋಜನೆಯಡಿ ಅನುದಾನ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಭೂಮಿಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಶಾಸಕ ಉಮೇಶ ಮೇಟಿ, ಸಾರ್ವಜನಿಕರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಸಮುದಾಯ ಭವನಗಳು ಸ್ಥಳೀಯ ಜನರು ಸಭೆ, ಸಾಂಸ್ಕೃತಿಕ ಕಾರ್ಯಕ್ರಮ, ಸಾಮಾಜಿಕ ಚಟುವಟಿಕೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಸಹಕಾರಿಯಾಗುತ್ತವೆ.

ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಹೇಳಿದರು.

ನವನಗರದಲ್ಲಿ ಸಮುದಾಯ ಭವನ ನಿರ್ಮಾಣವಾಗುತ್ತಿರುವುದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಸ್ಥಳೀಯರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದಂತಾಗಿದೆ. ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಮೂಲಕ ಕ್ಷೇತ್ರದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ ಕಾರ್ಯ ಮುಂದುವರಿಯಲಿದೆ ಎಂದು ಶಾಸಕ ಉಮೇಶ ಮೇಟಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಸಮುದಾಯ ಭವನ ನಿರ್ಮಾಣಕ್ಕೆ ಸಂತಸ ವ್ಯಕ್ತಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande