
ವಿಜಯಪುರ, 28 ಸೆಪ್ಟೆಂಬರ್ (ಹಿ.ಸ.)
ವಿಜಯಪುರ ಜಿಲ್ಲೆಯ ಸಿಂದಗಿ
ಪಟ್ಟಣದಲ್ಲಿರುವ ತಮ್ಮ ಗೃಹಕಚೇರಿಯಲ್ಲಿ ಶಾಸಕ ಅಶೋಕ ಮನಗೂಳಿ ಅವರು ಇಂದು ಸಾರ್ವಜನಿಕರನ್ನು ಭೇಟಿ ಮಾಡಿ, ವಿವಿಧ ಸಮಸ್ಯೆ ಹಾಗೂ ಕುಂದು-ಕೊರತೆಗಳನ್ನು ಆಲಿಸಿದರು.
ತಮ್ಮ ಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ರಸ್ತೆ, ಕುಡಿಯುವ ನೀರು, ಮೂಲಸೌಕರ್ಯ, ವಿದ್ಯುತ್, ಸರ್ಕಾರಿ ಸೌಲಭ್ಯಗಳು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಶಾಸಕರಿಗೆ ಅಹವಾಲುಗಳನ್ನು ಸಲ್ಲಿಸಿದರು.
ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಶಾಸಕರ ಗಮನಕ್ಕೆ ತಂದು, ಸಂಬಂಧಪಟ್ಟ ಇಲಾಖೆಗಳ ಮೂಲಕ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದರು.
ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಶಾಸಕ ಅಶೋಕ ಮನಗೂಳಿ ಅವರು ಪ್ರತಿಯೊಂದು ಮನವಿಯನ್ನು ಪರಿಶೀಲಿಸಿ, ಸಮಸ್ಯೆಗಳ ಸ್ವರೂಪ ಹಾಗೂ ತುರ್ತು ಅಗತ್ಯತೆಗಳ ಕುರಿತು ಮಾಹಿತಿ ಪಡೆದುಕೊಂಡರು. ಬಳಿಕ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ದೂರವಾಣಿ ಮೂಲಕ ಕರೆ ಮಾಡಿ, ಸಾರ್ವಜನಿಕರ ಸಮಸ್ಯೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ಶೀಘ್ರವಾಗಿ ಪರಿಹರಿಸುವಂತೆ ಸೂಚನೆ ನೀಡಿದರು.
ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳ ಪ್ರಮುಖ ಜವಾಬ್ದಾರಿಯಾಗಿದ್ದು, ಕ್ಷೇತ್ರದ ಜನರು ತಮ್ಮ ಸಮಸ್ಯೆಗಳನ್ನು ನೇರವಾಗಿ ತಿಳಿಸಲು ಯಾವುದೇ ಹಿಂಜರಿಕೆ ಬೇಡ ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದರು.
ಸಾರ್ವಜನಿಕರ ಅಹವಾಲುಗಳಿಗೆ ಆದ್ಯತೆ ನೀಡಿ, ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ಗೃಹಕಚೇರಿಯಲ್ಲಿ ನಡೆದ ಜನತಾ ಅಹವಾಲು ಸ್ವೀಕಾರ ಸಂದರ್ಭದಲ್ಲಿ ಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande