
ನವದೆಹಲಿ, 03 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಇಂದಿನಿಂದ ಸೆ. 5ರವರೆಗೆ ಉಕ್ರೇನ್ ಮತ್ತು ಪೋಲೆಂಡ್‌ಗೆ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ.
ಪ್ರವಾಸದ ವೇಳೆ ಉಕ್ರೇನ್ ವಿದೇಶಾಂಗ ಸಚಿವ ಆಂಡ್ರಿ ಸಿಬಿಹಾ ಹಾಗೂ ಪೋಲೆಂಡ್‌ನ ಉಪ ಪ್ರಧಾನಮಂತ್ರಿ ಮತ್ತು ವಿದೇಶಾಂಗ ಸಚಿವ ರಾಡೋಸ್ಲಾವ್ ಸಿಕೋರ್ಸ್ಕಿ ಅವರೊಂದಿಗೆ ಜೈಶಂಕರ್ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಎರಡೂ ದೇಶಗಳೊಂದಿಗಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವುದು, ಪ್ರಾದೇಶಿಕ ಬೆಳವಣಿಗೆಗಳು ಹಾಗೂ ಪರಸ್ಪರ ಹಿತಾಸಕ್ತಿಯ ವಿವಿಧ ವಿಷಯಗಳ ಕುರಿತು ಈ ವೇಳೆ ಚರ್ಚೆ ನಡೆಯಲಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.