ಕಾಂಗ್ರೆಸ್ ಭಾರತ್ ಜೋಡೋ 2.0 ಪಾದಯಾತ್ರೆಗೆ ಚಾಲನೆ
ಶಿವಮೊಗ್ಗ, 30 ಸೆಪ್ಟೆಂಬರ್ (ಹಿ.ಸ.): ಕಾಂಗ್ರೆಸ್ 2023ರ ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕೆಪಿಸಿಸಿ ಆಯೋಜಿಸಿರುವ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಚಾಲನೆ ನೀಡಲಾಯಿತು. ಕೆಪಿಸಿಸಿ ಅಧ್ಯಕ್ಷ ಬಿ.ಕೆ.
ಹರಿಪ್ರಸಾದ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪೋಟೋ


ಶಿವಮೊಗ್ಗ, 30 ಸೆಪ್ಟೆಂಬರ್ (ಹಿ.ಸ.):

ಕಾಂಗ್ರೆಸ್ 2023ರ ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕೆಪಿಸಿಸಿ ಆಯೋಜಿಸಿರುವ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಚಾಲನೆ ನೀಡಲಾಯಿತು.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದ್ದು, 2022ರಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕ ಪ್ರವೇಶಿಸಿ ನಾಲ್ಕು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಪಾದಯಾತ್ರೆ ಆಯೋಜಿಸಲಾಗಿದೆ.

ಕಾಂಗ್ರೆಸ್ 2023ರ ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ 84 ಕ್ಷೇತ್ರಗಳಲ್ಲಿ ಕಾರ್ಯಕ್ರಮ ನಡೆಸಲು ಯೋಜನೆ ರೂಪಿಸಿದ್ದು, ಒಟ್ಟು 84 ದಿನಗಳ ಕಾಲ 29 ಜಿಲ್ಲೆಗಳಲ್ಲಿ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ.

ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿಯಿಂದ ಪಾದಯಾತ್ರೆ ಆರಂಭವಾಗಿದ್ದು, ಮತ್ತಿಕೋಟೆ, ಹೊಸನಗರ ಕ್ರಾಸ್ ಹಾಗೂ ನೆಲವಾಗಿಲು ಮಾರ್ಗವಾಗಿ ಶಿಕಾರಿಪುರ ಪಟ್ಟಣದತ್ತ ಸಾಗುತ್ತಿದೆ. ಸುಮಾರು 10 ಕಿ.ಮೀ. ಪಾದಯಾತ್ರೆ ನಡೆಯಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬಳಿಕ ಶಿಕಾರಿಪುರದಲ್ಲಿ ಬಹಿರಂಗ ಸಮಾವೇಶ ನಡೆಯಲಿದೆ.

ಪಾದಯಾತ್ರೆಯಲ್ಲಿ ಸಚಿವರಾದ ಮಧು ಬಂಗಾರಪ್ಪ, ಕೆ.ಎಸ್. ಬಸವಂತಪ್ಪ ಸೇರಿದಂತೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳಿಂದಲೂ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande