
ಬಳ್ಳಾರಿ, 30 ಸೆಪ್ಟೆಂಬರ್ (ಹಿ.ಸ.)
ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಎಸ್ಐಆರ್ ಮರುಪರಿಶೀಲನೆ ನಡೆಯುತ್ತಿರುವುದರ ಕುರಿತು ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಲ್ಲಂ ಪ್ರಶಾಂತ್ ಅವರು ಅಧಿಕಾರಿಗಳು ಸ್ಪಷ್ಟನೆ ನೀಡಬೇಕು ಎಂದು ಕೋರಿದ್ದಾರೆ.
ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತರಾಗಿರುವ ಮಂಜುನಾಥ್ ಅವರ ನೇತೃತ್ವದಲ್ಲಿ ಬುಧವಾರ ನಡೆದ ಸರ್ವಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಈ ಕುರಿತು ವಿಷಯ ಪ್ರಸ್ತಾಪ ಮಾಡಿದ ಅಲ್ಲಂ ಪ್ರಶಾಂತ್ ಅವರು, ಬಿಜೆಪಿ ನೀಡಿರುವ ದೂರಿನ ಪ್ರಕಾರ ಮತ್ತೊಮ್ಮೆ ಎಸ್ಐಆರ್ ಮರು ಪರಿಶೀಲನೆ ನಡೆಸುತ್ತಿರುವುದು ಸರಿಯಲ್ಲ. ಈ ಕುರಿತು ಅಧಿಕಾರಿಗಳು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
ನಿರ್ದಿಷ್ಟ ಸಮುದಾಯ ಹಾಗೂ ಸಮಾಜವನ್ನು ಗುರಿ ಮಾಡಿಕೊಂಡು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಈ ಕುರಿತು ಆ ಸಮುದಾಯ - ಸಮಾಜದ ಮತದಾರರು ತೀವ್ರ ಅಸಮಾಧಾನದ ಜೊತೆಯಲ್ಲ ಆತಂಕವನ್ನೂ ವ್ಯಕ್ತಪಡಿಸುತ್ತಿದೆ. ಕಾರಣ ಅಧಿಕಾರಿಗಳು ಈ ಕುರಿತು ಸ್ಪಷ್ಟನೆ ನೀಡಿ, ನಿರ್ದಿಷ್ಟ ಸಮುದಾಯ - ಸಮಾಜವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಕೋರಿದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್