
ಬೆಂಗಳೂರು, 30 ಸೆಪ್ಟೆಂಬರ್ (ಹಿ.ಸ.):
ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಬೆಂಗಳೂರು ಸಂಚಾರ ಪೊಲೀಸರು ತಂತ್ರಜ್ಞಾನದ ಬಳಕೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದೀಗ ಪ್ರಮುಖ ಜಂಕ್ಷನ್ಗಳಲ್ಲಿ ಡ್ರೋನ್ಗಳ ಮೂಲಕ ಸಂಚಾರ ಪರಿಸ್ಥಿತಿಯ ಮೇಲೆ ನಿಗಾ ಇಡುತ್ತಿದ್ದಾರೆ.
ನಗರದ ಹತ್ತು ಸಂಚಾರ ಉಪವಿಭಾಗಗಳಿಗೆ ತಲಾ ಒಂದು ಡ್ರೋನ್ ಹಂಚಿಕೆ ಮಾಡಲಾಗಿದೆ. ಬೆಳಗ್ಗೆ ಹಾಗೂ ಸಂಜೆ ಪೀಕ್ ಅವರ್ಗಳಲ್ಲಿ ಹೈ ಡೆನ್ಸಿಟಿ ಜಂಕ್ಷನ್ಗಳು ಮತ್ತು ಪ್ರಮುಖ ರಸ್ತೆಗಳಲ್ಲಿ ಸಂಚಾರದ ಸ್ಥಿತಿಯನ್ನು ಡ್ರೋನ್ಗಳ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತಿದೆ.
ಇದರಿಂದ ಸಂಚಾರ ದಟ್ಟಣೆ ಉಂಟಾಗುವ ಸ್ಥಳಗಳನ್ನು ತ್ವರಿತವಾಗಿ ಗುರುತಿಸಿ, ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸರಿಗೆ ನೆರವಾಗಲಿದೆ.
ಹೆಬ್ಬಾಳ, ಟೌನ್ಹಾಲ್, ಸಿಲ್ಕ್ ಬೋರ್ಡ್ ಸೇರಿದಂತೆ ನಗರದ ಪ್ರಮುಖ ಜಂಕ್ಷನ್ಗಳಲ್ಲಿ ಡ್ರೋನ್ ಕಣ್ಗಾವಲು ನಡೆಸಲಾಗುತ್ತಿದೆ. ಸಂಚಾರ ದಟ್ಟಣೆಯ ಜೊತೆಗೆ ವಿವಿಐಪಿಗಳ ಸಂಚಾರದ ಸಂದರ್ಭದಲ್ಲಿಯೂ ಡ್ರೋನ್ಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುತ್ತಿದೆ.
ಈ ಕುರಿತು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಕಾರ್ತಿಕ್ ರೆಡ್ಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ನಗರದ ಹೈ ಡೆನ್ಸಿಟಿ ಜಂಕ್ಷನ್ಗಳಲ್ಲಿ ಸಂಚಾರ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಡ್ರೋನ್ಗಳನ್ನು ಬಳಸಲಾಗುತ್ತಿದೆ.
ಹತ್ತು ಸಂಚಾರ ಉಪವಿಭಾಗಗಳಿಗೆ ತಲಾ ಒಂದು ಡ್ರೋನ್ ನೀಡಲಾಗಿದ್ದು, ಪೀಕ್ ಅವರ್ಗಳಲ್ಲಿ ಪ್ರಮುಖ ಪ್ರದೇಶಗಳಲ್ಲಿ ಕಣ್ಗಾವಲು ನಡೆಸಲಾಗುತ್ತಿದೆ. ವಿವಿಐಪಿ ಸಂಚಾರದ ಸಂದರ್ಭದಲ್ಲಿಯೂ ಡ್ರೋನ್ಗಳ ಬಳಕೆ ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R