
ನವದೆಹಲಿ, 05 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಜಾರ್ಖಂಡ್ ಪಬ್ಲಿಕ್ ಸರ್ವಿಸ್ ಕಮಿಷನ್ (ಜೆಪಿಎಸ್ಸಿ) ಪರೀಕ್ಷೆಯಲ್ಲಿನ ಅನಿಯಮಿತತೆಗಳು ಹಾಗೂ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಮಹಿಳೆಯರ ಕಡಿಮೆ ಪ್ರಾಿನಿಧಿತ್ವದ ವಿಚಾರವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಜಾರ್ಖಂಡ್ನಲ್ಲಿ ನಡೆದ ಘಟನೆಯು ವಿದ್ಯಾರ್ಥಿಗಳ ಹಿತಾಸಕ್ತಿಗಳ ಬಗ್ಗೆ ಕಾಂಗ್ರೆಸ್ ಪಕ್ಷದ ನೈತಿಕತೆಯನ್ನು ಬಯಲು ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.
ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ಸಂಸದ ಸುಧಾಂಶು ತ್ರಿವೇದಿ, ಅಸಿಸ್ಟೆಂಟ್ ಕನ್ಸರ್ವೇಟರ್ ಆಫ್ ಫಾರೆಸ್ಟ್ ಮತ್ತು ಫಾರೆಸ್ಟ್ ರೇಂಜ್ ಆಫೀಸರ್ ಪರೀಕ್ಷೆಯ ಸಂದರ್ಭದಲ್ಲಿ ಸ್ಟ್ರಾಂಗ್ ರೂಮ್ ಒಡೆದು ಪ್ರಶ್ನೆಪತ್ರಿಕೆಗಳನ್ನು ಹೊರತೆಗೆದು ಬದಲಾವಣೆ ಮಾಡಲಾಗಿದೆ ಎಂದು ತನಿಖೆಯಿಂದ ಬಹಿರಂಗಗೊಂಡಿದೆ ಎಂದು ಆರೋಪಿಸಿದರು. ಇದು ಕೇವಲ ಪೇಪರ್ ಸೋರಿಕೆಯಲ್ಲ, ಬದಲಿಗೆ ಪೇಪರ್ ಲೂಟಿಯಾಗಿದೆ ಎಂದು ಅವರು ಬಣ್ಣಿಸಿದರು. ಈ ಸಂಪೂರ್ಣ ಪ್ರಕರಣದ ಬಗ್ಗೆ ಕಾಂಗ್ರೆಸ್ ಮೌನವಾಗಿರುವುದು ಜಾರ್ಖಂಡ್ನ ಅಭ್ಯರ್ಥಿಗಳಿಗೆ ಅತ್ಯಂತ ನೋವಿನ ಸಂಗತಿಯಾಗಿದೆ ಎಂದರು.
ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಮಹಿಳಾ ಪ್ರತಿನಿಧಿತ್ವದ ಬಗ್ಗೆ ಮಾತನಾಡಿದ ಅವರು, ದೇಶದ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರವಿದ್ದರೂ, ಆ ರಾಜ್ಯಗಳ ಸಚಿವ ಸಂಪುಟಗಳಲ್ಲಿ ಒಟ್ಟು ಸೇರಿ ಕೇವಲ ಮೂವರು ಮಹಿಳಾ ಸಚಿವರಿದ್ದಾರೆ ಎಂದು ಟೀಕಿಸಿದರು.
ರಾಜ್ಯವಾರು ಮಹಿಳಾ ಸಚಿವರ ವಿವರ:ಹಿಮಾಚಲ ಪ್ರದೇಶ ಮತ್ತು ಕರ್ನಾಟಕ: ಒಬ್ಬರೂ ಮಹಿಳಾ ಸಚಿವರಿಲ್ಲ.ಕೇರಳ: ಇಬ್ಬರು ಮಹಿಳಾ ಸಚಿವರಿದ್ದಾರೆ.ತೆಲಂಗಾಣ: ಮೊದಲು ಇಬ್ಬರು ಮಹಿಳಾ ಸಚಿವರಿದ್ದರು, ಅದರಲ್ಲಿ ಒಬ್ಬರನ್ನು ಕೈಬಿಡಲಾಗಿದೆ.
ಮಹಿಳೆಯರ ರಾಜಕೀಯ ಪ್ರತಿನಿಧಿತ್ವದ ವಿಷಯದಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕಾ ಗಾಂಧಿ ಮೌನ ವಹಿಸಿದ್ದಾರೆ ಎಂದು ಅವರು ಆರೋಪಿಸಿದರು. ಕಾಂಗ್ರೆಸ್ ಪಕ್ಷದ ಮಾತು ಮತ್ತು ಆಚರಣೆಯಲ್ಲಿ ಸ್ಪಷ್ಟ ವ್ಯತ್ಯಾಸವಿದೆ ಎಂದು ವಾಗ್ದಾಳಿ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಇತಿಹಾಸದಲ್ಲೇ ಅತಿ ಹೆಚ್ಚು ಮಹಿಳಾ ಸಚಿವರಿಗೆ ಅವಕಾಶ ಕಲ್ಪಿಸಲಾಗಿದೆ ಎಂದ ಸುಧಾಂಶು ತ್ರಿವೇದಿ, ಮಹಿಳಾ ಸಬಲೀಕರಣದ ವಿಷಯದಲ್ಲಿ ಬಿಜೆಪಿಯ ಮಾತು ಮತ್ತು ಕೃತಿ ಒಂದೇ ಆಗಿದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದ ಸುಳ್ಳು ಭರವಸೆಗಳು ಮತ್ತು ಅದರ ನೈತಿಕ ಆಚರಣೆಯನ್ನು ಗಮನಿಸುವಂತೆ ಅವರು ಮಹಿಳೆಯರಲ್ಲಿ ಮನವಿ ಮಾಡಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R