ದೆಹಲಿ ಸತ್ಯ ನಿಕೇತನ ಕಟ್ಟಡ ಅವಘಡ: ಐವರು ಅಧಿಕಾರಿಗಳ ಅಮಾನತು
ನವದೆಹಲಿ, 07 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ದೆಹಲಿಯ ಸತ್ಯ ನಿಕೇತನದಲ್ಲಿ ಪಿಜಿ ಕಟ್ಟಡ ಕುಸಿದು ಆರು ಮಂದಿ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ದಕ್ಷಿಣ ವಲಯದ ಉಪ ಆಯುಕ್ತ ಸೇರಿದಂತೆ ಐವರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ. ಅಮಾನತುಗೊಂಡವರಲ್ಲ
मुख्यमंत्री रेखा गुप्ता  सोमवार सुबह सत्य निकेतन घटनास्थल का दौरा कर सुरक्षा व्यवस्था एवं चल रही कार्रवाई की समीक्षा करते हुए


ನವದೆಹಲಿ, 07 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ದೆಹಲಿಯ ಸತ್ಯ ನಿಕೇತನದಲ್ಲಿ ಪಿಜಿ ಕಟ್ಟಡ ಕುಸಿದು ಆರು ಮಂದಿ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ದಕ್ಷಿಣ ವಲಯದ ಉಪ ಆಯುಕ್ತ ಸೇರಿದಂತೆ ಐವರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ.

ಅಮಾನತುಗೊಂಡವರಲ್ಲಿ ದಕ್ಷಿಣ ವಲಯದ ಉಪ ಆಯುಕ್ತ ರಾಕೇಶ್ ಕುಮಾರ್, ಅಧೀಕ್ಷಕ ಎಂಜಿನಿಯರ್ ರಣವೀರ್ ಸಿಂಗ್, ಕಾರ್ಯನಿರ್ವಾಹಕ ಎಂಜಿನಿಯರ್ (ಕಟ್ಟಡ) ಲಲಿತ್ ಕುಮಾರ್ ಗೋಯಲ್, ಸಹಾಯಕ ಎಂಜಿನಿಯರ್ ಸುನೀಲ್ ಚೌಹಾಣ್ ಹಾಗೂ ಕಿರಿಯ ಎಂಜಿನಿಯರ್ ಆಶೀಷ್ ಕುಮಾರ್ ಸೇರಿದ್ದಾರೆ.

ಸೋಮವಾರ ಬೆಳಗ್ಗೆ ಮತ್ತೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ, ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಿದರು. ಸುಮಾರು ಶೇ.80ರಷ್ಟು ಅವಶೇಷಗಳನ್ನು ತೆರವುಗೊಳಿಸಲಾಗಿದ್ದು, ನೆಲಮಾಳಿಗೆಯ ಅವಶೇಷಗಳ ತೆರವು ಮಾತ್ರ ಬಾಕಿಯಿದೆ ಎಂದು ತಿಳಿಸಿದರು. ನೆಲಮಾಳಿಗೆಯಲ್ಲಿ ನೀರು ಸಂಗ್ರಹವಾಗಿದ್ದ ಜೊತೆಗೆ ಹಳೆಯ ಕಟ್ಟಡದಲ್ಲಿ ದುರಸ್ತಿ ಕಾಮಗಾರಿ ನಡೆಯುತ್ತಿದ್ದ ಕಾರಣ ಕಟ್ಟಡ ಕುಸಿದಿರುವ ಸಾಧ್ಯತೆ ಇದೆ ಎಂದರು.

ಈವರೆಗೆ 12 ಮಂದಿಯನ್ನು ರಕ್ಷಿಸಲಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ. ಉಳಿದ ಆರು ಮಂದಿಯ ಆರೋಗ್ಯ ಸ್ಥಿರವಾಗಿದೆ. ದೆಹಲಿಯಲ್ಲಿ ಐದನೇ ಮಹಡಿ ಹೊಂದಿರುವ ಕಟ್ಟಡಗಳನ್ನು ತಕ್ಷಣ ಮುಚ್ಚುವಂತೆ ಹಾಗೂ ಸುತ್ತಮುತ್ತಲಿನ ಪಿಜಿ ಮತ್ತು ಕಟ್ಟಡಗಳನ್ನು ತೀವ್ರವಾಗಿ ಪರಿಶೀಲಿಸಿ ನಿಯಮ ಉಲ್ಲಂಘನೆ ಕಂಡುಬಂದರೆ ಮುಚ್ಚುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಜನರ ಸುರಕ್ಷತೆಯಲ್ಲಿ ಯಾವುದೇ ರಾಜಿ ಇಲ್ಲ, ನಿರ್ಲಕ್ಷ್ಯಕ್ಕೆ ಯಾರನ್ನೂ ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande