ಮುಖ್ಯಮಂತ್ರಿಗಳ ಸಂವಹನ ಸಲಹೆಗಾರರಾಗಿ ದೀಪಕ್ ತಿಮ್ಮಯ ನೇಮಕ
ಬೆಂಗಳೂರು, 08 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಮುಖ್ಯಮಂತ್ರಿಗಳ ಸಂವಹನ ಸಲಹೆಗಾರರಾಗಿ ದೀಪಕ್ ತಿಮ್ಮಯ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ದೀಪಕ್ ತಿಮ್ಮಯ ಅವರು ಮುಖ್ಯಮಂತ್ರಿಗಳ ಪದಾವಧಿ ಮುಗಿಯುವವರೆಗೆ ಅಥವಾ ಮುಂದಿನ ಆದೇಶ ಹೊರಡಿಸುವವರೆಗೆ—ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ—
ಆದೇಶ ಪ್ರತಿ


ಬೆಂಗಳೂರು, 08 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಮುಖ್ಯಮಂತ್ರಿಗಳ ಸಂವಹನ ಸಲಹೆಗಾರರಾಗಿ ದೀಪಕ್ ತಿಮ್ಮಯ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ದೀಪಕ್ ತಿಮ್ಮಯ ಅವರು ಮುಖ್ಯಮಂತ್ರಿಗಳ ಪದಾವಧಿ ಮುಗಿಯುವವರೆಗೆ ಅಥವಾ ಮುಂದಿನ ಆದೇಶ ಹೊರಡಿಸುವವರೆಗೆ—ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ—ಸಂವಹನ ಸಲಹೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗಾಯತ್ರಿ ಜಿ.ಎನ್. ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande