
ನವದೆಹಲಿ, 08 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಕೇಂದ್ರ ಜವಳಿ ಸಚಿವ ಗಿರಿರಾಜ್ ಸಿಂಗ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ನಾಯಕರು ಶುಭಾಶಯ ಕೋರಿದ್ದಾರೆ.
ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ತಿಳಿಸಿ, ಜವಳಿ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ಗಿರಿರಾಜ್ ಸಿಂಗ್ ಹಲವು ಮಹತ್ವದ ಉಪಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತೀಯ ಪರಂಪರೆಯೊಂದಿಗೆ ಆಳವಾಗಿ ಬೆಸೆದುಕೊಂಡಿರುವ ಜವಳಿ ಕ್ಷೇತ್ರವು ಆತ್ಮನಿರ್ಭರ ಭಾರತದ ಗುರಿ ಸಾಧನೆಗೆ ಮಹತ್ವದ್ದಾಗಿದೆ ಎಂದು ಹೇಳಿದರು.
ಓಂ ಬಿರ್ಲಾ ಅವರು ಗಿರಿರಾಜ್ ಸಿಂಗ್ ಅವರ ಆರೋಗ್ಯ, ಸಂತೋಷ ಹಾಗೂ ಮಂಗಳಮಯ ಜೀವನಕ್ಕಾಗಿ ಹಾರೈಸಿದರು. ರಾಜನಾಥ್ ಸಿಂಗ್ ಅವರು ನೆಲಮಟ್ಟದೊಂದಿಗೆ ನಂಟು ಹೊಂದಿ ದೇಶ ಹಾಗೂ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ, ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಕೂಡ ಗಿರಿರಾಜ್ ಸಿಂಗ್ ಅವರಿಗೆ ಆರೋಗ್ಯ, ಸಂತೋಷ ಮತ್ತು ದೀರ್ಘಾಯುಷ್ಯಕ್ಕಾಗಿ ಶುಭ ಹಾರೈಸಿದ್ದಾರೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.