
ಬೆಂಗಳೂರು, 08 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಕಣ್ಣಿಗೆ ಕಂಡದ್ದನ್ನೆಲ್ಲಾ ಆಸಕ್ತಿಯಿಂದ, ಕುತೂಹಲದಿಂದ ನೋಡುತ್ತಾ ತಿಳಿಯುತ್ತಾ ಸಾಗಬೇಕು ಎಂಬ ಚಿಂತನೆಯಂತೆ ಬದುಕಿದವರು ಪೂರ್ಣಚಂದ್ರ ತೇಜಸ್ವಿಯವರು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಮರಿಸಿದ್ದಾರೆ.
ಕುವೆಂಪು ಅವರ ಪುತ್ರರಾಗಿದ್ದರೂ ತಮ್ಮದೇ ಆದ ಸ್ವತಂತ್ರ ಚಿಂತನೆ ಹಾಗೂ ವಿಶಿಷ್ಟ ಶೈಲಿಯಿಂದ ‘ಕರ್ವಾಲೋ’, ‘ಚಿದಂಬರ ರಹಸ್ಯ’, ‘ಜುಗಾರಿ ಕ್ರಾಸ್’ ಸೇರಿದಂತೆ ಅಮೋಘ ಕೃತಿಗಳನ್ನು ಕನ್ನಡ ಸಾಹಿತ್ಯಕ್ಕೆ ನೀಡಿದವರು ತೇಜಸ್ವಿ ಎಂದು ಅವರು ಹೇಳಿದ್ದಾರೆ.
ಕೃಷಿ, ಛಾಯಾಗ್ರಹಣ, ಪರಿಸರ ಕಾಳಜಿ ಹಾಗೂ ವೈಜ್ಞಾನಿಕ ಮನೋಭಾವವನ್ನು ಸಾಹಿತ್ಯದ ಭಾಗವಾಗಿಸಿ, ಯುವ ಸಮುದಾಯಕ್ಕೆ ಪ್ರಕೃತಿಯ ವಿಸ್ಮಯಗಳನ್ನು ನೋಡುವ ಹೊಸ ದೃಷ್ಟಿಕೋನ ಕಲಿಸಿದ ಮಹಾನ್ ಚೇತನ ಪೂರ್ಣಚಂದ್ರ ತೇಜಸ್ವಿ. ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳನ್ನು ಸಲ್ಲಿಸುವುದಾಗಿ ಡಿ.ಕೆ.ಶಿವಕುಮಾರ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.