ಇಂದಿನಿಂದ ರಾಜನಾಥ ಸಿಂಗ್ ಶ್ರೀಲಂಕಾಕ್ಕೆ ಮೂರು ದಿನಗಳ ಅಧಿಕೃತ ಪ್ರವಾಸ
ನವದೆಹಲಿ, 08 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಮೂರು ದಿನಗಳ ಅಧಿಕೃತ ಪ್ರವಾಸಕ್ಕಾಗಿ ನವದೆಹಲಿಯಿಂದ ಶ್ರೀಲಂಕಾಕ್ಕೆ ತೆರಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಶ್ರೀಲಂಕಾ ನಾಯಕತ್ವದೊಂದಿಗೆ ಫಲಪ್ರದ ಮಾತುಕತೆ ನಡೆಸುವ ನಿರೀಕ್ಷೆಯಿದೆ ಎ
ರಾಜನಾಥ ಸಿಂಗ್ ಸಂಗ್ರಹ ಚಿತ್ರ


ನವದೆಹಲಿ, 08 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಮೂರು ದಿನಗಳ ಅಧಿಕೃತ ಪ್ರವಾಸಕ್ಕಾಗಿ ನವದೆಹಲಿಯಿಂದ ಶ್ರೀಲಂಕಾಕ್ಕೆ ತೆರಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಶ್ರೀಲಂಕಾ ನಾಯಕತ್ವದೊಂದಿಗೆ ಫಲಪ್ರದ ಮಾತುಕತೆ ನಡೆಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಪ್ರವಾಸದ ವೇಳೆ ಶ್ರೀಲಂಕಾದಲ್ಲಿರುವ ಭಾರತೀಯ ಸಮುದಾಯದೊಂದಿಗೂ ಸಂವಾದ ನಡೆಸುವುದಾಗಿ ಹೇಳಿದ್ದಾರೆ.

ಭಾರತ ಮತ್ತು ಶ್ರೀಲಂಕಾ ನಡುವಿನ ದೀರ್ಘಕಾಲದ ಪಾಲುದಾರಿಕೆ, ಐತಿಹಾಸಿಕ ಹಾಗೂ ನಾಗರಿಕ ಸಂಬಂಧಗಳು ಮತ್ತಷ್ಟು ಬಲಪಡಿಸುವುದರ ಜೊತೆಗೆ, ‘ನೆರೆಹೊರೆ ಮೊದಲು’ ಮತ್ತು ‘ಮಹಾಸಾಗರ’ ಉಪಕ್ರಮಗಳ ಅಡಿಯಲ್ಲಿ ಶ್ರೀಲಂಕಾ ಭಾರತದ ಪ್ರಮುಖ ಪಾಲುದಾರ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ರಾಜನಾಥ ಸಿಂಗ್ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande