ಎಪಿಎಂಸಿಯಲ್ಲಿ ಬಾಲ ಕಾರ್ಮಿಕ ಪದ್ಧತಿ ತಕ್ಷಣ ನಿಲ್ಲಿಸಿ:ಮುಖ್ಯಮಂತ್ರಿ
ಬೆಂಗಳೂರು, 08 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಯಶವಂತಪುರ ಎಪಿಎಂಸಿಯಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ತಕ್ಷಣದಿಂದಲೇ ನಿಲ್ಲಿಸುವಂತೆ ಸೂಚಿಸಲಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವವರನ್ನು ಬಂಧಿಸಿ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮ
ಎಪಿಎಂಸಿಯಲ್ಲಿ ಮುಖ್ಯಮಂತ್ರಿ


ಬೆಂಗಳೂರು, 08 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ಯಶವಂತಪುರ ಎಪಿಎಂಸಿಯಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ತಕ್ಷಣದಿಂದಲೇ ನಿಲ್ಲಿಸುವಂತೆ ಸೂಚಿಸಲಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವವರನ್ನು ಬಂಧಿಸಿ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಯಶವಂತಪುರ ಎಪಿಎಂಸಿಗೆ ಮಂಗಳವಾರ ದಿಢೀರ್ ಭೇಟಿ ನೀಡಿ ರೈತರು, ವ್ಯಾಪಾರಿಗಳು ಹಾಗೂ ಕೂಲಿ ಕಾರ್ಮಿಕರೊಂದಿಗೆ ಚರ್ಚಿಸಿದ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಸಣ್ಣ ಮಕ್ಕಳಿಂದ ಕೆಲಸ ಮಾಡಿಸುವುದನ್ನು ಕೂಡಲೇ ನಿಲ್ಲಿಸಬೇಕು. ರಾಜ್ಯದ ಇತರೆ ಎಪಿಎಂಸಿಗಳಿಗೂ ಸಚಿವರು ಭೇಟಿ ನೀಡಿ ಸಮಸ್ಯೆ ಹಾಗೂ ದೂರುಗಳನ್ನು ಪರಿಶೀಲಿಸಿ ಪರಿಹರಿಸುವಂತೆ ಸೂಚಿಸಲಾಗುವುದು ಎಂದರು.

ಎಪಿಎಂಸಿ ಮಾರುಕಟ್ಟೆಗಳು ರೈತರು ಹಾಗೂ ವ್ಯಾಪಾರಸ್ಥರ ನಡುವಿನ ಪ್ರಮುಖ ಕೊಂಡಿಯಾಗಿವೆ. ರೈತರು ಎದುರಿಸುತ್ತಿರುವ ಸಮಸ್ಯೆಗಳು, ದಲ್ಲಾಳಿಗಳು ಹಾಗೂ ವರ್ತಕರು ಪಡೆಯುತ್ತಿರುವ ಕಮಿಷನ್ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ರೈತರು, ವ್ಯಾಪಾರಿಗಳು, ಮಧ್ಯವರ್ತಿಗಳು ಹಾಗೂ ಕೂಲಿ ಕಾರ್ಮಿಕರೊಂದಿಗೆ ಚರ್ಚಿಸಿ ಹಲವು ಸಲಹೆ ಮತ್ತು ದೂರುಗಳನ್ನು ಆಲಿಸಿದ್ದೇನೆ. ರಾಜ್ಯದ ಮುಖ್ಯಸ್ಥನಾಗಿ ರೈತರ ಸಮಸ್ಯೆ ಹಾಗೂ ಕಷ್ಟಗಳನ್ನು ಅರಿತುಕೊಳ್ಳುವುದು ನನ್ನ ಕರ್ತವ್ಯ ಎಂದರು.

ಎಪಿಎಂಸಿ ಮಾರುಕಟ್ಟೆಗಳಲ್ಲಿನ ವ್ಯಾಪಾರ ಬಹುತೇಕ ನಂಬಿಕೆಯ ಆಧಾರದ ಮೇಲೆ ನಡೆಯುತ್ತಿದ್ದು, ರೈತರು ಹಾಗೂ ವ್ಯಾಪಾರಿಗಳಿಗೆ ನ್ಯಾಯ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ. ಮಾರುಕಟ್ಟೆ ಸ್ಥಳಾಂತರದ ಬಗ್ಗೆಯೂ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ರಾಜ್ಯದ ಎಲ್ಲಾ ಎಪಿಎಂಸಿಗಳಿಗೆ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರು ಹಾಗೂ ವರ್ತಕರಿಗೆ ನ್ಯಾಯ ಒದಗಿಸಬೇಕು. ಮಾರುಕಟ್ಟೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande